ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಅಕ್ರಮವಾಗಿ ಕಂದಾಯ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಂಡವರಿಂದ, ಸಕ್ರಮಗೊಳಿಸಲು ಅರ್ಜಿಯನ್ನು ಆಹ್ವಾನಿಸಿದೆ.
ಸರ್ಕಾರದ ಸೂಚನೆ ಮೇರೆಗೆ ಕಂದಾಯ ಇಲಾಖೆ ( Revenue Department ) ಆದೇಶ ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದ ಸರ್ಕಾರಿ ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಕಂದಾಯ ಇಲಾಖೆಯಿಂದ ಸೂಕ್ತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರು ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31, 2022 ಕೊನೆಯ ದಿನಾಂಕವಾಗಿದೆ.
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ನೀಡಿ, ಹೀಗೆ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರಿಂದ ನಮೂನೆ 94ಸಿಸಿಯಲ್ಲಿ ಅರ್ಜಿ ಪಡೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸೂಚಿಸಿದೆ.