ಮೈಸೂರು,ಜನವರಿ,20,2025 (www.justkannada.in): ಕಳೆದ ಮೂರ್ನಾಲ್ಕು ದಿನಗಳಿಂದೀಚೆಗೆ ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲೂ ಹಾಡಹಗಲೇ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ.
ಹೌದು ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಮುಸುಕುದಾರಿಗಳು ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಕಾರನ್ನೆ ಕದ್ದೊಯ್ದಿರುವ ಘಟನೆ ನಡೆದಿದೆ. ಕೇರಳ ಉದ್ಯಮಿ ಸೂಫಿ ಎಂಬುವವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕಾರನ್ನೇ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ರಘು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Key words: robbery, Mysore, Car, Theft