ಬೆಂಗಳೂರು, ಸೆಪ್ಟೆಂಬರ್ 15, 2022 (www.justkannada.in): ಭಾರತದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಎಲ್ಲ ಮಾದರಿಯ ಕ್ರಿಕೆಟ್ನಿಂದ ತನ್ನ ನಿವೃತ್ತಿ ಪ್ರಕಟಿಸಿದ್ದಾರೆ.
ಆಕ್ರಮಣಕಾರಿ ಬ್ಯಾಟಿಂಗ್ಗೆ ಪ್ರಸಿದ್ಧಿ ಪಡೆದಿದ್ದ ಉತ್ತಪ್ಪ ಏಕದಿನ ಹಾಗೂ ಟ್ವೆಂಟಿ-20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
2007ರಲ್ಲಿ ಮೊದಲ ಆವೃತ್ತಿಯ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ಐಪಿಎಲ್ ತಂಡದಲ್ಲಿ ಮೂರು ಬಾರಿ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. ಒಮ್ಮೆ ಆರೆಂಜ್ ಕ್ಯಾಪ್ ಗೆದ್ದಿದ್ದರು.
2006ರಲ್ಲಿ ಗುವಾಹಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಅಂತರ್ರಾಷ್ಟ್ರೀಯ ಕ್ರಿಕೆಟಿಗೆ ಕಾಲಿಟ್ಟಿದ್ದರು. ಭಾರತದ ಪರ 46 ಏಕದಿನ ಪಂದ್ಯಗಳನ್ನು ಆಡಿದ್ದ ಅವರು ಒಟ್ಟು 934 ರನ್ ಗಳಿಸಿದ್ದರು. 86 ವೈಯಕ್ತಿಕ ಗರಿಷ್ಠ ಸ್ಕೋರಾಗಿತ್ತು.
2007ರ ಮೊದಲ ಆವೃತ್ತಿಯ ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದರು. 13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 118.01ರ ಸ್ಟ್ರೈಕ್ರೇಟ್ನಲ್ಲಿ ಒಟ್ಟು 249 ರನ್ ಗಳಿಸಿದ್ದರು.