ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ರಿಲೀಫ್: ಬಂಧನ ವಾರೆಂಟ್ ಗೆ ಹೈಕೋರ್ಟ್ ತಡೆ

ಬೆಂಗಳೂರು,ಡಿಸೆಂಬರ್, 31,2024 (www.justkannada.in): ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ದದ ಬಂಧನ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ.

ಈ ಮೂಲಕ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ರಿಲೀಫ್ ಸಿಕ್ಕಿದೆ.  ತಾನು ಪಾಲುದಾರನಾಗಿದ್ದ ಕಂಪನಿಯಲ್ಲಿನ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಬಂಧನ ವಾರೆಂಟ್‌  ಜಾರಿಯಾಗಿತ್ತು.  ಇದೀಗ ಹೈಕೋರ್ಟ್ ಬಂಧನ ವಾರೆಂಟ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಆರೋಪ ಸಂಬಂಧ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ರಿಕವರಿ ನೋಟಿಸ್ ಮತ್ತು ಬಂಧನ ವಾರೆಂಟ್ ಪ್ರಶ್ನಿಸಿ ರಾಬಿನ್ ಉತ್ತಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ.

 ರಾಬಿನ್ ಉತ್ತಪ್ಪ ಮೆಸಸ್ ಸೆಂಚುರೀಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಗೆ ಪಾಲುದಾರರಾಗಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಇಪಿಎಫ್ ಹಣ ಪಾವತಿಸಿಲ್ಲ. ಸಂಬಳದಲ್ಲಿ ಇಪಿಎಫ್ ಹಣ ಕಡಿತಗೊಳಿಸಿಕೊಂಡು, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ.ಗಳನ್ನು ವಂಚಿಸಿರುವ ಆರೋಪ ಕೇಳಿ ಬಂದಿತ್ತು.

Key words: former cricketer ,Robin Uthappa,  High Court ,stay,  arrest warrant