BREAKING NOW : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ : CAT ವಿಚಾರಣೆ ಮತ್ತೆ ಮುಂದೂಡಿಕೆ.

 

ಬೆಂಗಳೂರು ,ನವಂಬರ್, 24, 2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಮುಂದಿನ ತಿಂಗಳಿಗೆ ಮತ್ತೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಅಡ್ವೊಕೇಟ್ ಜನರಲ್ ಅವರು, ಮುಂದಿನ 10 ದಿನಗಳ ಕಾಲ ಹಾಜರಾಗಲು ಸಾಧ್ಯವಿಲ್ಲ ಎಂದು ಮತ್ತೆ ಕಾಲಾವಕಾಶ ಕೇಳಿದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಡಿ .4 ಕ್ಕೆ ನ್ಯಾಯಾಲಯ ಮುಂದೂಡಿತು.

I didn't knew CM BSY will think so cheaply - KPCC President D.K. Shivakumar

ಘಟನೆ ಹಿನ್ನೆಲೆ :

ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಈ ಹಿಂದೆ ಅಕ್ಟೋಬರ್ 23ಕ್ಕೆ ಮುಂದೂಡಿತ್ತು.
ಅರ್ಜಿದಾರರ ಪರ ವಕೀಲ, ಎ.ಎಸ್.ಪೊನ್ನಣ್ಣ ವಾದ ಮಂಡನೆ ಬಳಿಕ ಪ್ರತಿವಾದ ಮಂಡಿಸಲು ಎಜಿ ಮತ್ತೆ ಕಾಲಾವಕಾಶ ಕೋರಿದರು .ಈ ಹಿನ್ನೆಲೆ ಸಿಎಟಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿತ್ತು. ಆನಂತ ಸಹ ವಿಚಾರಣೆ ನಡೆಯದೇ ನ. 3 ಕ್ಕೆ ಮತ್ತೆ ಅಲ್ಲಿಂದ ನ. 23ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಅಡ್ವೊಕೇಟ್ ಜನರಲ್ ಅವರು ಕಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಆರನೇ ಬಾರಿಗೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

Rohini Sindhuri – Mysore- DC- CAT- postponed –petition -April 23– IAS Officer- B.Sharath

oooo

Key words: Rohini Sindhuri – Mysore- DC- CAT- postponed –petition -April 23– IAS Officer- B.Sharath

summary :
Case has been adjourned to 4th December. AG had requested to CAT that he will not be able to attend for the next 10 days.
—————-