ಮೈಸೂರು,ಅಕ್ಟೋಬರ್,6,2020(www.justkannada.in): ನವೆಂಬರ್ 3 ರಂದು ನಡೆಯುವ ಆರ್.ಆರ್ ನಗರ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಚಾರ, ಡಿ.ಕೆ ರವಿ ಅವರ ಪತ್ನಿ ಕುಸುಮಾ ಹೆಸರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಇಂದು ಸಂಜೆ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ಕೆಪಿಸಿಸಿ ಇಂದ ಒಂದೇ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಕುಸುಮಾ ಅವರು ಹೆಸರು ಅಂತಿಮವಾಗಿ ಸಂಜೆ ಪ್ರಕಟವಾಗುತ್ತೆ ಎಂದು ತಿಳಿಸಿದ್ದಾರೆ.
ಕುಸುಮ ಸ್ಪರ್ಧೆಗೆ ಅತ್ತೆ ಗೌರಮ್ಮ ವಿರೋಧ ವಿಚಾರ. ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ವಿರೋಧ ಮಾಡುವವರ ಬಗ್ಗೆ ನಾನೇನು ಮಾತನಾಡಲ್ಲ.ಅವರು ವಿರೋಧ ಮಾಡಿದ್ದಾರೋ, ಬಿಟ್ಟಿದ್ದಾರೋ ನನಗೆ ಗೊತ್ತಿಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ. ನಾವು ಜನರ ಮುಂದೆ ನಮ್ಮ ಅಭ್ಯರ್ಥಿ ಪರ ಓಟು ಕೇಳ್ತೀವಿ. ಅಂತಿಮವಾಗಿ ಜನರು ತೀರ್ಮಾನ ಮಾಡ್ತಾರೆ ಎಂದರು.
ಆರ್ ಆರ್ ನಗರದಲ್ಲಿ ಮುನಿರತ್ನಗೆ ಬಿಜೆಪಿ ಟಿಕೆಟ್ ಅನುಮಾನ ವಿಚಾರ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಮುನಿರತ್ನಗೆ ಟಿಕೆಟ್ ಕೊಡುತ್ತೋ ಬಿಡುತ್ತೋ ನನಗೆ ಗೊತ್ತಿಲ್ಲ. ಅವರು ಪಕ್ಷದ ಆಂತರಿಕ ವಿಚಾರದ ಬಗ್ಗೆ ನಾನು ಮಾತನಾಡಲ್ಲ ಬಿಜೆಪಿಯಿಂದ ಮುನಿರತ್ನ, ಮುನಿರಾಜುಗೌಡ ಹೆಸರನ್ನ ಶಿಫಾರಸ್ಸು ಮಾಡಲಾಗಿದೆ ಅಂತ ಕೇಳಿದ್ದೇನೆ. ಯಾರಿಗಾದರೂ ಟಿಕೆಟ್ ಕೊಡಲಿ ನಾವು ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೀವಿ ಎಂದರು.
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆಗಿ ಮುಂದುವರಿಯಲು ನಾಲಾಯಕ್…
ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆಗಿ ಮುಂದುವರಿಯಲು ನಾಲಾಯಕ್. ಯೋಗಿ ಆದಿತ್ಯನಾಥ್ ವಿರುದ್ದ 27 ಪ್ರಕರಣಗಳು ದಾಖಲಾಗಿವೆ. ನಾಲ್ಕೈದು ಪ್ರಕರಣಗಳು ದಾಖಲಾದರೆ ರೌಡಿಶೀಟರ್ ಹಾಕುತ್ತಾರೆ. ಯೋಗಿ ಆದಿತ್ಯನಾಥ್ ಕಾವಿ ಬಟ್ಟೆ ತೊಡಲು ಯೋಗ್ಯರಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ಯೋಗಿ ಆದಿತ್ಯನಾಥ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
Key words: RR nagar- by Election-formercm-Siddaramaiah -announces -Kusuma’s name – Congress candidate.