ಬೆಂಗಳೂರು, ಜನವರಿ 01, 2023 (www.justkannada.in): ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರಿಗೆ ಇಂದಿನಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ವಿಶ್ವದಾದ್ಯಂತ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಸರಕಾರ ಈ ನಿರ್ಧಾರ ಕೈಗೊಂಡಿದೆ.
ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಕೋರೋನಾ ಹೆಚ್ಚಾಗಿದೆ. ಹೀಗಾಗಿ ಈ ದೇಶಗಳಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಈ ಆದೇಶ ಅನ್ವಯವಾಗಲಿದೆ.
ತಮ್ಮ ದೇಶದಲ್ಲಿ ಪ್ರಯಾಣಿಸುವ ಮುನ್ನ ಮೊದಲು ‘ಏರ್ ಸುವಿಧಾ’ ಪೋರ್ಟಲ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ಹಾಕಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.