ಮೈಸೂರು,ಮಾರ್ಚ್,19,2021(www.justkannada.in): ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ದ ಉದ್ಯಮಗಳು, ಹೋಟೆಲ್, ಕಾರ್ಖಾನೆ, ಮಾಲ್ ಸಿಬ್ಬಂದಿಗೆ ಕೋವಿಡ್ 19 ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿ ಮೈಸೂರು ಪಾಲಿಕೆ ಆಯುಕ್ತರ ಮೂಲಕ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಮೂಲಕ ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಜಿಲ್ಲಾಡಳಿತ ವತಿಯಿಂದ ಉಚಿತವಾಗಿ ಕೋವಿಡ್ 19 ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪ್ರಕಟಣೆ ಹೊರಡಿಸಲಾಗಿದೆ.
ಈ ಕುರಿತು ಹೋಟೆಲ್ ಮಾಲೀಕರ ಸಂಘ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಮೈಸೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಕೋವಿಡ್ ಪರೀಕ್ಷೆಗೆ ಪಾಲಿಕೆಗೆ ಮನವಿ ಸಲ್ಲಿಸಿದ್ದಲ್ಲಿ ಕಾರ್ಖಾನೆ, ಉದ್ಯಮ ಸ್ಥಳಗಳಿಗೆ ವೈದ್ಯರ ತಂಡವನ್ನು ರವಾನಿಸಿ ಕಾರ್ಮಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ.
Key words: RTPCR -testing –mandatory- hotel –factories- mall –staff-mysore- District administration