ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ಸಿಗಬೇಕು ಎಂದು ರಷ್ಯಾ ಹೇಳಿದೆ.
ವಿಶ್ವಸಂಸ್ಥೆಯ 77ನೇ ಸಾಮಾನ್ಯ ಸಭೆಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಈ ಕುರಿತು ಹೇಳಿಕೆ ನೀಡಿದ್ದಾರೆ.
‘ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್ ಅಮೆರಿಕದ ರಾಷ್ಟ್ರಗಳನ್ನೂ ಸೇರಿಸಿಕೊಳ್ಳುವ ಮೂಲಕ ಭದ್ರತಾ ಮಂಡಳಿಯನ್ನು ಮತ್ತಷ್ಟು ಪ್ರಜಾಸತ್ತಾತ್ಮಕವಾಗಿಸುವುದನ್ನು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಬ್ರೆಜಿಲ್ ಪ್ರಮುಖ ರಾಷ್ಟ್ರಗಳಾಗಿದ್ದು, ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಪರಿಗಣಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ. ಇದೇ ವೇಳೆ ಅವರು ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.