ನವದೆಹಲಿ,ಫೆಬ್ರವರಿ,24,2022(www.justkannada.in): ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದು ಇದರ ಪರಿಣಾಮ ಅಂತರಾಷ್ಟ್ರೀಯ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ನಮಗೆ ಉಕ್ರೇನ್ ಮೇಲೆ ಯುದ್ಧ ಸಾರುವ ಇರಾದೆಯಿಲ್ಲ ಎಂದು ಹೇಳುತ್ತಲೇ ಬಂದಿದ್ದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ.
ಹಾಗೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಉಕ್ರೇನ್ ಮೇಲೆ ಸೇನಾ ಕಾರ್ಯಾಚರಣೆ ಘೋಷಣೆ ಮಾಡುತ್ತಿದ್ದಂತೆ ಅತ್ತ ಉಕ್ರೇನ್ನ ಕೈವ್ ಮತ್ತು ಖಾರ್ಕಿವ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಬಂದಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗುವಂತಾಯ್ತು ಎಂದು ವರದಿಯಾಗಿದೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ಹಿನ್ನೆಲೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದೆ. ಹೀಗಾಗಿ ಅಂತರಾಷ್ಟ್ರೀಯ ತೈಲೆ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ ಏಕಾಏಕಿ ಬ್ಯಾರಲ್ ಬೆಲೆ 100 ಡಾಲರ್ ದಾಟಿದೆ. ಈಹಿನ್ನೆಲೆಯಲ್ಲಿ ಮಾರ್ಚ್ 8ರ ಬಳಿಕ ಕಚ್ಚಾತೈಲ ಬೆಲೆ ಏರಿಕೆ ಸಾಧ್ಯತೆ ಇದೆ. ಯುದ್ಧದ ಪರಿಣಾಮ ಚಿನ್ನದ ಬೆಲೆ ಗಗನಕ್ಕೇರಿದೆ 10 ಗ್ರಾಂ ಚಿನ್ನದ ದರ 53 ಸಾವಿರ ರೂ. ಗೆ ಏರಿಕೆಯಾಗಿದೆ ಚಿನ್ನದ ಬೆಲೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ ಎನ್ನಲಾಗಿದೆ. ಈ ಎಫೆಕ್ಟ್ ಭಾರತಕ್ಕೂ ತಟ್ಟಲಿದೆ ಎಂದು ಹೇಳಲಾಗುತ್ತಿದೆ.
Key words: Russian-declaration – war – Ukraine