ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ : ನ್ಯಾಯಮೂರ್ತಿ ಬಿ.ಎ.ಪಾಟೀಲ್

Information regarding 192(A) from S. Palayya, Revenue Member of the Karnataka Land Grabbing Prohibition Special Court.

 

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಎಸ್.ಪಾಲಯ್ಯ ಅವರಿಂದ  192(ಎ) ಸಂಬಂಧಿಸಿದಂತೆ ಮಾಹಿತಿ.

Information regarding 192(A) from S. Palaiah, Revenue Member of the Karnataka Land Grabbing Prohibition Special Court.

ಮಡಿಕೇರಿ, ಏ.07,2025:  ಭೂ ಕಬಳಿಕೆ ನಿರಂತರವಾಗಿ ನಡೆದಿದ್ದು, ಇದರ ನಿಯಂತ್ರಣ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡುವುದು ಅಥವಾ ಭೂಕಬಳಿಕೆ ಆಗದಂತೆ ಗಮನಹರಿಸುವುದು ವಿವಿಧ  ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ  ಬಿ.ಎ.ಪಾಟೀಲ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಾಕಷ್ಟು ಕಾನೂನುಗಳಿದ್ದರೂ ಸಹ ಭೂ ಕಬಳಿಕೆ ನಿಂತಿಲ್ಲ. ಇತ್ತೀಚಿನ ದಿನಗಳಲ್ಲಿ ಭೂಮಿ ಬೆಲೆ ಗಗನಕ್ಕೇರುವುದರಿಂದ ಭೂಮಾಫಿಯ ಹೆಚ್ಚಾಗಿದೆ. ಗೋಮಾಳ, ಕೆರೆಕಟ್ಟೆ, ಹಳ್ಳಕೊಳ್ಳ, ರಾಜಕಾಲುವೆ ಸೇರಿದಂತೆ ಎಲ್ಲವನ್ನು ಒತ್ತುವರಿ ಮಾಡುತ್ತಿದ್ದಾರೆ. ಇದನ್ನು ತಡೆಯುವುದು ವಿವಿಧ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಕರ್ನಾಟಕ ಲ್ಯಾಂಡ್ ರೆವೆನ್ಯೂ ಆಕ್ಟ್ ಸೇರಿದಂತೆ ವಿವಿಧ ಕಾಯ್ದೆಗಳಿದ್ದರೂ ಸಹ ಭೂ ಕಬಳಿಕೆ ನಡೆಯುತ್ತಿದೆ. ಇದಕ್ಕೆ ಪ್ರಮುಖ ಕಾರಣ ಶಿಕ್ಷೆ ಪ್ರಮಾಣ ಕಡಿಮೆ ಎಂದರೆ ತಪ್ಪಾಗಲಾರದು. ಮೂರು ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ಇದ್ದರೂ ಸಹ ಭೂ ಕಬಳಿಕೆಗೆ ಮುಂದಾಗುತ್ತಿದ್ದಾರೆ. ಒತ್ತುವರಿ ಮಾಡಿರುವ ಅಥವಾ ಭೂ ಕಬಳಿಕೆ ಮಾಡಿರುವ ಆಸ್ತಿಯನ್ನು ಮಾರುತ್ತಾರೆ. ಈ ನಿಟ್ಟಿನಲ್ಲಿ ಕೊಳ್ಳುವವರು ಯೋಚಿಸಬೇಕು. ಜೊತೆಗೆ ಪರಾಮರ್ಶಿಸಬೇಕು. ಸುಮ್ಮನೆ ಏಕಾಏಕಿ ಭೂಮಿ ಕೊಳ್ಳುವುದು ಸರಿಯಲ್ಲ ಎಂದು ಬಿ.ಎ.ಪಾಟೀಲ ಅವರು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಕುರುಕ್ಷೇತ್ರ ನಡೆದಿರುವುದೇ ಭೂಮಿಗಾಗಿ ಎನ್ನುವುದನ್ನು ಯಾರೂ ಮರೆಯುವಂತಿಲ್ಲ. ಅನಾದಿಕಾಲದಿಂದಲೂ ನೀರು, ಭೂಮಿಗಾಗಿ ಯುದ್ಧಗಳೇ ನಡೆದಿವೆ. ಆದ್ದರಿಂದ ಸರ್ಕಾರಿ ಭೂಮಿ ಸಂರಕ್ಷಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು.

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಳ ಆಗುತ್ತಿದೆ. ಜೊತೆಗೆ ಜನರಲ್ಲಿ ದುರಾಸೆಯು ಸಹ ಹೆಚ್ಚಾಗಿದೆ. ಆದ್ದರಿಂದ ಭೂ ಕಬಳಿಕೆಯೂ ಸಹ ಅಧಿಕವಾಗುತ್ತಿದೆ. ಆದ್ದರಿಂದ ಸರ್ಕಾರಿ ಭೂಮಿ ಸಂರಕ್ಷಣೆ ಬಗ್ಗೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲೀಕ ಮಾತನಾಡಿ,  ಕಾನೂನಿನಲ್ಲಿ ಎರಡು ರೀತಿ ಇದ್ದು, ಒಂದು ಮನುಷ್ಯ ಮಾಡಿದ ಕಾನೂನು, ಇನ್ನೊಂದು ಪ್ರಕೃತಿದತ್ತವಾದ ನಿಯಮಗಳಿದ್ದು, ಸಂವಿಧಾನದ ನಿಯಮಗಳು ಒಂದು ವ್ಯವಸ್ಥೆಯಲ್ಲಿ ಕಾನೂನು ಆಗಿದ್ದು, ಇದನ್ನು ಪ್ರತಿಯೊಬ್ಬರೂ ಪಾಲಿಸುವುದು ಅತ್ಯಗತ್ಯವಾಗಿದೆ ಎಂದರು.

ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕ ಎಲ್.ನಾರಾಯಣಸ್ವಾಮಿ ಮಾತನಾಡಿ, 1863 ರಿಂದ 1879 ರವರೆಗೆ ಸರ್ವೆ ಕಾರ್ಯ ನಡೆದಿದ್ದು, 1906 ರಿಂದ 1912 ರವರೆಗೆ ಗಡಿ ಗ್ರಾಮ ನಿಗಧಿ ಮಾಡುವ ಸರ್ವೆ ನಡೆದಿದೆ. ಸರ್ಕಾರಿ ಭೂಮಿ ನಿಗಧಿಪಡಿಸುವುದು. ಆಕಾರಬಂಧು ನಿಗಧಿ ಮಾಡುವುದು, ಬಿ.ಖರಾಬು, ಗ್ರಾಮ ನಕಾಶೆ ಮತ್ತಿತರ ಮೂಲಕ ಸರ್ವೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಆಳವಡಿಸಿಕೊಂಡು ತಂತ್ರಾಂಶದ ಮೂಲಕ ಸರ್ವೆ ಕಾರ್ಯ ತಕ್ಷಣವೇ ಗುರುತಿಸಲಾಗುತ್ತದೆ ಎಂದು ಹೇಳಿದರು.

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯರಾದ ಎಸ್.ಪಾಲಯ್ಯ ಅವರು   192(ಎ) ಸಂಬಂಧಿಸಿದಂತೆ ಮಾತನಾಡಿ ಮಹಜರು, ದಿನಾಂಕ, ಭೂಮಿ ಸರ್ವೆ ಮಾಡಿರುವ ಬಗ್ಗೆ ಸ್ಪಷ್ಟ ಮಾಹಿತಿ ಇರಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ ಕೆರೆ ಕಟ್ಟೆಗಳನ್ನು ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡುವುದು ಎಷ್ಟೋ ಕಡೆ ಕಂಡುಬರುತ್ತಿದೆ. ಮಳೆ ಬಂದಾಗ ಪರಿತಪಿಸುತ್ತಾರೆ. ಆದ್ದರಿಂದ ಕರ್ನಾಟಕ ಕೆರೆ ಸಂರಕ್ಷಣಾ ಕಾಯ್ದೆಯಂತೆ ಕೆರೆ, ಕಟ್ಟೆ, ಕಾಲುವೆಗಳನ್ನು ಉಳಿಸಬೇಕು. ಇದರಿಂದ ಜಲ ಸಂರಕ್ಷಣೆ ಸಾಧ್ಯವಾಗಲಿದೆ ಎಂದರು.

ನಗರಸಭೆ ಕಂದಾಯ ಅಧಿಕಾರಿ ಎಂ.ಎ.ತಾಹಿರ್ ಅವರು ಮಾತನಾಡಿ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲಿ ರಸ್ತೆ, ಮಾರುಕಟ್ಟೆ, ಉದ್ಯಾನವನ, ಆಸ್ತಿಪಾಸ್ತಿ ಒತ್ತುವರಿ ಕಂಡು ಬರುತ್ತಿದೆ. ಅದನ್ನು ತಡೆಯುವಲ್ಲಿ ಸ್ಥಳೀಯ ಸಂಸ್ಥೆಗಳು ಮುಂದಾಗುತ್ತಿವೆ ಎಂದರು.

key words: S. Palaiah, Revenue Member,  Karnataka Land Grabbing Prohibition Special Court. MUDA, Mysore.

SUMMARY:

Information regarding 192(A) from S. Palaiah, Revenue Member of the Karnataka Land Grabbing Prohibition Special Court.