ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆಪ್ಟೆಂಬರ್,18,2020(www.justkannada.in)  :  ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

jk-logo-justkannada-logo

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಸೇರಿದ ಸಂಘದ ಸದಸ್ಯರು ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಸಂಘದ ರಾಜ್ಯಾಧ್ಯಕ್ಷ ಎನ್.ರಾಜು ಮಾತನಾಡಿ, ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರು ದಲಿತರಲ್ಲಿ ಎಡಗೈ ಪಂಗಡದವರಿಗೆ ಶೇ.6ರಷ್ಟು ಮೀಸಲಾತಿ ನೀಡಬೇಕೆಂದು ಸರಕಾರಕ್ಕೆ ಆಯೋಗ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಮಾದಿಗ ಸಮುದಾಯಕ್ಕೆ ಸಂಬಂಧಿಸಿದಂತೆ ಸುಮಾರು 50 ಉಪಜಾತಿಗಳ ಪೈಕಿ ಆದಿ ದ್ರಾವಿಡ ಎಡಗೈ ಮಾದಿಗ ಸಮುದಾಯಕ್ಕೆ ಸೇರಿದ್ದು, ನಮ್ಮ ಆದಿ ದ್ರಾವಿಡ ಮಾದಿಗ ಸಮುದಾಯವು ದಶಕಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ವಂಚನೆಗೊಳಗಾಗಿದೆ ಎಂದು ಅಳಲು ತೋಡಿಕೊಂಡರು.

Sadashiva-Commission-Report-passed-Protest-demanding

ವಂಚಿತವಾಗಿರುವ ಉಪಜಾತಿಗಳಿಗೆ ಅನ್ಯಾಯವಾಗಿರುವುದನ್ನು ಗಮನಿಸಿ ದೇಶದ ಸರ್ವೋಚ್ಛ ನ್ಯಾಯಾಲಯವು ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ಸರಕಾರಗಳಿಗೆ ಇದೆ ಎಂದು ತೀರ್ಪು ನೀಡಿದೆ. ಹಾಗಾಗಿ, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದವರು ನೀಡಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗೌ.ಅಧ್ಯಕ್ಷ ಸಿ.ಎಂ.ರಾಮಯ್ಯ, ರಂಗಣ್ಣ, ಸಣ್ಣಬೋರ, ಎಂ.ಕೃಷ್ಣ, ಪಿ.ಮಂಜುನಾಥ್, ಡಿ.ಆರ್.ರಾಜು, ಎಂ.ವಡಿವೇಲ್, ಮಂಚಯ್ಯ, ಜಿ.ಅಶೋಕ್, ನಂಜುಂಡ, ರಂಗಸ್ವಾಮಿ,ಮುರುಗೇಶ್ ಇತರರು ಭಾಗವಹಿಸಿದ್ದರು.

key words : Sadashiva-Commission-Report-passed-Protest-demanding