ಬೆಂಗಳೂರು,ಸೆಪ್ಟಂಬರ್,16,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಅವರನ್ನ ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ಸಂಜನಾ ಹಾಗೂ ನಟಿ ರಾಗಿಣಿ ಸಿಲುಕಿದ್ದು ನಟಿ ರಾಗಿಣಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಇಂದು ವಿಚಾರಣೆಗೆ ಹಾಜರಾಗುವಂತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈಗೆ ಸಿಸಿಬಿ ನಿನ್ನೆ ನೋಟೀಸ್ ನೀಡಿದ್ದರು.
ಈ ಹಿನ್ನೆಲೆ ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ದಿಗಂತ್ ಐಂದ್ರಿತಾ ದಂಪತಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಬ್ಬರನ್ನೂ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಗೆಯೇ ಇಬ್ಬರ ಮೊಬೈಲ್ ಅನ್ನು ಸಹ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Sandalwood –Drugs- -Actor Diginth – actress- Aindrita Rai -detained – CCB.