ಬೆಂಗಳೂರು, ಏಪ್ರಿಲ್ 16, 2021 (www.justkannada.in):
ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸರಿತಾ ಮೋರ್ 59 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಕಜಕಸ್ತಾನದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಸೋಲುಕಂಡಿದ್ದ ಮಂಗೋಲಿಯಾದ ಶೂಡೋರ್ ಬಾತರ್ಜಾವಿನ್ ವಿರುದ್ಧವೇ ಫೈನಲ್ನಲ್ಲಿ ಗೆದ್ದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಫೈನಲ್ ಪಂದ್ಯದಲ್ಲಿ 1-7ರಲ್ಲಿ ಹಿನ್ನಡೆ ಅನುಭವಿಸಿದ್ದ ಸರಿತಾ ಅದ್ಭುತ ರೀತಿಯಲ್ಲಿ ಕಮ್ ಬ್ಯಾಕ್ 10 – 7 ಅಂಕಗಳ ಅಂತರದಿಂದ ಗೆದ್ದು ಮೊದಲ ಸುತ್ತಿನ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ.
ಸೆಮಿಫೈನಲ್ನಲ್ಲಿ ಕಿರ್ಗಿಸ್ತಾನದ ನುರೈದಾ ಅನರ್ಕುಲೊವಾ ವಿರುದ್ಧ ಕೇವಲ 90 ಸೆಕೆಂಡ್ಗಳಲ್ಲೇ ಪಂದ್ಯವನ್ನು ಗೆದ್ದು ಫೈನಲ್ ಪ್ರವೇಶಿಸಿದ್ದರು.