ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸಲಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜನವರಿ,15,2025 (www.justkannada.in):  ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಶಾಸಕರ ಅಭಿಪ್ರಾಯವನ್ನ ಕೇಳಬೇಕು. ಶಾಸಕರ ಅಭಿಪ್ರಾಯದಂತೆ ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಕೆಲಸ ಕಡಿಮೆಯಾಗಿದೆ.  ಎಲ್ಲಾ ಕಾರ್ಯಾಧ್ಯಕ್ಷರು ಮಂತ್ರಿ ಆಗಿದ್ದೇವೆ.  ಕಾರ್ಯಾಧ್ಯಕ್ಷರು ಮೊದಲಿನಂತೆ ಕೆಲಸ ಮಾಡುತ್ತಿಲ್ಲ. ಅಧ್ಯಕ್ಷರ ಬದಲಾವಣೆಗೆ ಎಲ್ಲರ  ಅಭಿಪ್ರಾಯವಿದೆ.  ಪೂರ್ಣ ಪ್ರಮಾಣದ ಅಧ್ಯಕ್ಷರ ಅವಶ್ಯಕತೆ ಇದೆ.  ನನ್ನ ಪರ ಸಾಕಷ್ಟು ಶಾಸಕರು ಧ್ವನಿ ಎತ್ತಿದ್ದಾರೆ. ಡಿಕೆ ಶಿವಕುಮಾರ್ ರನ್ನು ಮುಂದುವರೆಸುತ್ತಾರೋ? ಅಥವಾ ಬೇರೆಯವರನ್ನ ನೇಮಿಸುತ್ತಾರೋ?  ಎಲ್ಲದಕ್ಕೂ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಶಾಸಕರ ಅಭಿಪ್ರಾಯ ಕೇಳಿ . ಅಧ್ಯಕ್ಷರ ಕುರಿತು ಅಭಿಪ್ರಾಯ ಸಂಗ್ರಹಿಸಬೇಕು. ಎಲ್ಲಾ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನಿಸಬೇಕು. ಶಾಸಕರ ಅಭಿಪ್ರಾಯದಂತೆ ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸಲಿ. ಶೀಘ್ರವೇ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಲಿ ಎಂದರು.

Key words: Minister, Satish Jarkiholi, KPCC, President