ಬೆಂಗಳೂರು,ಮಾರ್ಚ್,20,2025 (www.justkannada.in): ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು.
ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ ಷಡ್ಯಂತ್ರ ನಡೆಯುತ್ತಿದೆ. ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್ ಮಾಡಲಾಗಿತ್ತು. ಹನಿಟ್ರ್ಯಾಪ್ ಗೆ ಕಡಿವಾಣ ಹಾಕಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Key words: Honeytrap, wicket, our government, Minister, Satish Jarakiholi