ಬೆಳಗಾವಿ,ಅಕ್ಟೋಬರ್,28,2020(www.justkannada.in): ಲಿಂಗಾಯತ ಪಂಚಮಸಾಲಿ ಸಮುದಾಯ ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸತ್ಯಾಗ್ರಹದಲ್ಲಿ ಪಂಚಮಸಾಲಿ ಸಮುದಾಯದ ನೂರಾರು ಮಂದಿ ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜವನ್ನ ಪ್ರವರ್ಗ 2ಎಗೆ ಸೇರಿಸಬೇಕು ಹಾಗೂ ಒಬಿಸಿ ಮೀಸಲಾತಿ ನೀಡಬೇಕು. ನಾವು ನಮಗಾಗಿ ಹೋರಾಟ ನಡೆಸುತ್ತಿಲ್ಲ. ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿಯ ಹಕ್ಕೊತ್ತಾಯ ಮಂಡಿಸುತ್ತಿದ್ದೇವೆ ಎಂದರು.
ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ನಡೆಯುತ್ತಿರುವ ಸತ್ಯಾಗ್ರಹ ಸ್ಥಳಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಮನವಿ ಸ್ವೀಕರಿಸಿದ್ದೇನೆ. ಈಗ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಅವರಿಗೆ ಏನು ಆಶ್ವಾಸನೆ ನೀಡಲು ಆಗಲಿಲ್ಲ. ಬೆಂಗಳೂರಿಗೆ ಹೋಗಿ ಶ್ರೀಗಳ ಮನವಿಯನ್ನ ಸಿಎಂಗೆ ಸಲ್ಲಿಸುತ್ತೇನೆ ಎಂದರು.
Key words: Satyagraha — Lingayat Panchamasaali – added – 2A category-Minister -Ramesh Jarakiholi-visit