ಮೈಸೂರು,ಮಾರ್ಚ್,15,2021(www.justkannada.in): ಮೀಸಲಾತಿಗಾಗಿ ಪಂಚಮಸಾಲಿ ಮತ್ತು ಕುರುಬ ಸಮುದಾಯ ಒತ್ತಾಯಿಸುತ್ತಿರುವ ಬೆನ್ನಲ್ಲೆ ಇದೀಗ ಮತ್ತೊಂದು ಜನಾಂಗ ಮೀಸಲಾತಿ ಹೋರಾಟ ಆರಂಭಿಸಿದೆ. ಮಡಿವಾಳ ಜನಾಂಗವನ್ನು ಪರಿಶಿಷ್ಠ ಜಾತಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಉಪವಾಸ ಸತ್ಯಾಗ್ರಹದ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ.
ಮೈಸೂರು ಜಿಲ್ಲಾ ಮಡಿವಾಳರ ಪರಿಶಿಷ್ಠ ಜಾತಿ ಹೋರಾಟ ಸಮಿತಿಯಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಪ್ರೊ. ಅನ್ನಪೂರ್ಣ ಅವರ ವರದಿಯಂತೆ ಕುಲ ಶಾಸ್ತ್ರೀಯ ಅಧ್ಯಯನ ವರದಿಯನ್ನ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಪರಿಶಿಷ್ಠ ಜಾತಿಗೆ ಮಡಿವಾಳ ಜನಾಗವನ್ನು ಸೇರಿಸಬೇಕು. ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಿ ಕೇಂದ್ರಕ್ಕೆ ಶಿಪಾರಸ್ಸು ಮಾಡುವಂತೆ ಒತ್ತಾಯಿಸಿ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಕೈಗೊಂಡಿದೆ.
Key words: Satyagraha –mysore- Madiwalacommunity- join- SC