ಮೈಸೂರು,ನ,16,2019(www.justkannada.in): ಕೆಲ ಮುಖಂಡರು ರಾಜಕೀಯ ಬಲದಿಂದ ಸರ್ಕಾರಿ ಭೂಮಿ ವಶಪಡಿಸಿಕೊಂಡಿದ್ದಾರೆ ಹೀಗಾಗಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಕುಟುಂಬ ಪ್ರತಿಭಟನೆ ನಡೆಸುತ್ತಿದೆ.
ನಂಜನಗೂಡು ತಾಲೂಕಿನ ಮಾದನಳ್ಳಿ ಗ್ರಾಮದ ಗೀರಿಶ್ ಕುಟುಂಬಸ್ಥರು ಪ್ರತಿಭಟನೆಗೆ ಕುಳಿತಿದ್ದಾರೆ. ಮಾದನಹಳ್ಳಿ ಗ್ರಾಮದಲ್ಲಿ ಒಂದು ಎಕರೆ ಇಪ್ಪತ್ತು ಗುಂಟೆ ಜಮೀನನ್ನ ಗ್ರಾಮದ ಪರಶಿವ ಮೂರ್ತಿ, ಶಿವಣ್ಣ, ಮಲ್ಲಿಕಾರ್ಜುನ, ಬಸವರಾಜು , ಮಹದೇವಪ್ಪ ಎಂಬುವವರು ಮೇಲೆ ಭೂ ಕಬಳಿಕೆ ಮಾಡಿದ್ದಾರೆ ಎಂದು ಗಿರೀಶ್ ಕುಟುಂಬಸ್ಥರು ಆರೋಪಿಸಿದ್ದಾರೆ.
ರಾಜಕೀಯ ಬಲದಿಂದ ಸರ್ಕಾರಿ ಭೂಮಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ತಾಲ್ಲೂಕಿನ ಅಧಿಕಾರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ನಂಜನಗೂಡು ತಹಶೀಲ್ದಾರರಿಗೆ ಮನವಿ ಮಾಡಿದರೂ ರಾಜಕೀಯ ಒತ್ತಡ ಇದೆ ಎಂದು ಹೇಳಿತ್ತಿದ್ದಾರೆಂದು ಪ್ರತಿಭಟನಾನಿರತ ಗಿರೀಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿದ ಸರ್ಕಾರಿ ಭೂಮಿಯನ್ನ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Key words: Save- government land-Farmer family – protest – front – mysore DC office.