ನವದೆಹಲಿ, ನವೆಂಬರ್ 14, 2019 (www.justkannada.in): ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.
2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ನೀಡುತ್ತಿದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.