ಬೆಂಗಳೂರು,ಡಿಸೆಂಬರ್,31,2020(www.justkannada.in): ರಾಜ್ಯದಲ್ಲಿ ನಾಳೆ(ಜನವರಿ 1)ಯಿಂದ ಶಾಲಾಕಾಲೇಜು, ವಿದ್ಯಾಗಮ ಆರಂಭವಾಗಲಿದ್ದು 8 ತಿಂಗಳ ಬಳಿಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅವಕಾಶ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿಗೆ ಭೇಟಿ ನೀಡಿದರು. ಈ ವೇಳೆ ಶಾಲಾರಂಭದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಾಳೆಯಿಂದ ಶಾಲಾಕಾಲೇಜುಗಳು ಆರಂಭವಾಗಲಿದ್ದು, ಮೊದಲನೇ ಹಂತದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯಗೊಳಿಸಲಾಗಿದೆ.
Key words: school-college –re open- tomorrow- Education Minister- Suresh Kumar -visits -college.