ಬೆಂಗಳೂರು,ಡಿಸೆಂಬರ್,28,2020(www.justkannada.in): ಜನವರಿ 1ರಿಂದ ಶಾಲಾ-ಕಾಲೇಜು, ವಿದ್ಯಾಗಮ ಆರಂಭವಾಗುವ ಹಿನ್ನೆಲೆ ಸಲಹೆಗಳನ್ನು ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆ ಆರಂಭ ವಿಚಾರದಲ್ಲಿ ಸಮನ್ವಯ ಅಗತ್ಯವಾಗಿದೆ. ಅದ್ದರಿಂದ ಅಧಿಕಾರಿಗಳಿಗೆ ಸೂಕ್ತ ಸಲಹೆ ನೀಡಬೇಕು. ಶಿಕ್ಷಣ ಇಲಾಖೆಗೆ ಮಾರ್ಗದರ್ಶನ, ಸಹಕಾರ ನೀಡಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಗೆ ಮನವಿ ಮಾಡಿದ್ಧಾರೆ.
ತಾಂತ್ರಿಕ ಸಲಹಾ ಸಮಿತಿಯ ಸೂಚನೆಯೊಂದಿಗೆ ಶಾಲೆ ಆರಂಭಿಸುತ್ತಿದ್ದೇವೆ. ಕೋವಿಡ್ ಕಾಲದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಸಹಕಾರ ನೀಡಿದ್ದೀರಿ. ಇದೀಗ ಶಾಲೆ ಆರಂಭಿಸಲು ನಿಮ್ಮ ಸಹಕಾರ ಅಗತ್ಯ ಸಚಿವ ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
Key words: School-college- start -Jan 1-Minister -Suresh Kumar – letter