ಬೆಂಗಳೂರು, ನವೆಂಬರ್,20,2020(www.justkannada.in): ರಾಜ್ಯದಲ್ಲಿ ಈಗಾಗಲೇ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಆರಂಭವಾಗಿದೆ. ಆದರೆ ಶಾಲೆಗಳ ಆರಂಭ ಕುರಿತು ಗೊಂದಲ ಉಂಟಾಗಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಕೋವಿಡ್ ನಿಂದಾಗಿ ಶಿಕ್ಷಣ ಇಲಾಖೆಗೆ ಹೆಚ್ಚು ಸಮಸ್ಯೆಯಾಗಿದೆ. ಒಂದು ವರ್ಗ ಶಾಲೆ ಆರಂಭಿಸಿ ಎನ್ನುತ್ತಾರೆ. ಮತ್ತೊಂದು ವರ್ಗ ಬೇಡ ಎನ್ನುತ್ತಾರೆ. ಹೀಗಾಗಿ ಶಾಲಾ ಆರಂಭದ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಸುರೇಶ್ ಕುಮಾರ್, ಒಂದು ವರ್ಗ ಶಾಲೆ ಆರಂಭಿಸದಿದ್ದರೇ ಮಕ್ಕಳು ಬಾಲಕಾರ್ಮಿಕರಾಗುತ್ತಾರೆ. ಬಾಲ್ಯ ವಿವಾಹ ಹೆಚ್ಚಾಗುತ್ತದೆ ಎನ್ನುತ್ತಾರೆ. ಮತ್ತೊಂದು ವರ್ಗ ಶಾಲೆ ಆರಂಭಿಸೋದು ಬೇಡ ಎನ್ನುತ್ತಾರೆ. ಹೀಗಾಗಿ ಈ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದೆ. ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದರು.
Key words: School- Start- Issue-Education minister -Suresh Kumar – enough- confusion.