ಬೆಂಗಳೂರು,ಜು,28,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಸದ್ಯಕ್ಕೆ ಶಾಲೆಗಳನ್ನ ತೆರೆಯದಿರಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸದ್ಯಕ್ಕೆ ಶಾಲೆಗಳನ್ನ ಓಪನ್ ಮಾಡಲ್ಲ. ಈ ಕೊರೋನಾ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ. ಮಕ್ಕಳನ್ನ ಶಾಲೆಗೆ ಕಳುಹಿಸದೆ ಕಲಿಕೆ. ಮಕ್ಕಳ ಕಲಿಕೆಗೆ ಹೊಸ ಯೋಜನೆಗಳನ್ನ ರೂಪಿಸಲಾಗುತ್ತದೆ ಎಂದರು.
ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಮಾಧ್ಯಮದ ಮೂಖಾಂತರವೂ ಪಾಠ ಮಾಡುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
Key words: Schools – not- open – present-education minister- suresh kumar