ಬೆಂಗಳೂರು,ಮೇ,26,2023(www.justkannada.in): ಮೇ 29 ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದ್ದು, ಈ ನಡುವೆ ಮುಂಗಾರು ಆರಂಭ ಹಿನ್ನಲೆ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನ ಬಳಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆಗಳ ಪುನಾರಂಭಗೊಳ್ಳಲಿವೆ. ಹೀಗಾಗಿ ಶಿಥಿಲಾವಸ್ಥೆ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ಸೂಚಿಸಿದೆ.
ಈಗಾಗಲೇ ಮುಂಗಾರು ಆರಂಭ ಹಿನ್ನಲೆ ಅಲರ್ಟ್ ಆಗಿರಬೇಕು. ಶಾಲೆ ಆರಂಭಕ್ಕೂ ಮೊದಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎನ್ನಲಾಗಿದೆ.
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ಗಳ ಶಿಥಿಲಗೊಂಡ ಬಗ್ಗೆ ಪರಿಶೀಲನೆ ನಡೆಸಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತಂದು ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ಉಪಹಾರ ವಿತರಿಸಬೇಕು ಎಂದು ತಿಳಿಸಲಾಗಿದೆ.
ಜೂನ್ 1ರಿಂದ ಶಾಲಾ ತರಗತಿಗಳನ್ನು ಆರಂಭಿಸುವ ಬಗ್ಗೆ ಸೂಚನೆ ನೀಡಿದ್ದು, ಮಳೆಯಿಂದಾಗಿ ಹಲವು ಭಾಗದಲ್ಲಿ ಹಳ್ಳ, ಕೊಳ್ಳ, ನದಿಗಳು ತುಂಬಿವೆ. ರಸ್ತೆ ಹಾಳಾಗಿದ್ದರೇ ಮಕ್ಕಳನ್ನು ಶಾಲೆಗೆ ಬರಲು ಒತ್ತಾಯಿಸಬಾರದು. ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸುವಂತೆ ಸೂಚಿಸಲಾಗಿದೆ.
Key words: Schools-start -May 29-Education Department -instructs -not use -dilapidated rooms