ಬೆಂಗಳೂರು,ಮಾರ್ಚ್,7,2025 (www.justkannada.in): ಎಸ್ ಸಿಪಿ ಟಿಎಸ್ ಪಿ ಯೋಜನೆಗೆ 42, 018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬಜೆಟ್ ನಲ್ಲಿ ಈ ಕುರಿತು ಉಲ್ಲೇಖಿಸಿರುವ ಸಿಎಂ ಸಿದ್ದರಾಮಯ್ಯ, ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸರ್ಕಾರದ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ 2 ಕೋಟಿವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು. 2ಎ, 2ಬಿ ಪ್ರವರ್ಗದ ಗುತ್ತಿಗೆದಾರರಿಗೂ ಮೀಸಲಾತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: Rs 42,018 crore, reserved, SCP TSP scheme, budget