ಬೆಂಗಳೂರು,ಏಪ್ರಿಲ್,10,2024 (www.justkannada.in): ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ 81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ. karresults.nic.in ಈ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು.
ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.
Key words: Second PU, Result, Announced