ಬೆಂಗಳೂರು,ಏಪ್ರಿಲ್,8,2025 (www.justkannada.in): 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಇಂದು ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು. ಉಡುಪಿ ಜಿಲ್ಲೆ 93.90 ರಷ್ಟು ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆ ಸ್ಥಾನ ಗಳಿಸಿದೆ. ಮಧ್ಯಾಹ್ನ 1.30ರ ಬಳಿಕ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೊಟ್ಟೂರು ಪಿಯುಸಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600ಕ್ಕೆ 596 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
Key words: Second PUC, Exam, Result, Udupi, First place