ಬೆಂಗಳೂರು,ಜು,14,2020(www.justkannada.in): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಈ ಬಾರಿ 61.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಪಿಯು ಫಲಿತಾಂಶದ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಾರಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 3,84,947 ಮಂದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶೇ. ಬಾರಿ 61.80 ರಷ್ಟು ಫಲಿತಾಂಶ ಬಂದಿದೆ ಎಂದರು.
ವಿಭಾಗವಾರು ವಿಜ್ಞಾನದಲ್ಲಿ ಶೇ.76.20 ವಾಣಿಜ್ಯ ವಿಭಾಗದಲ್ಲಿ ಶೇ. 65.52, ಹಾಗೂ ಕಲಾ ವಿಭಾಗದಲ್ಲಿ 41.27 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
Key words: Second PUC – result-61.80 percent -students -pass.