ಮೈಸೂರು,ಸೆಪ್ಟಂಬರ್,15,2021(www.justkannada.in): ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕ ಸಮನ್ವಯ ಸಮಿತಿ ಜಿಲ್ಲಾ ಸಮಿತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕ ಸಮನ್ವಯ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದರೂ ಸೇವಾ ಭದ್ರತೆ ಇಲ್ಲ. ರಾಜ್ಯಾದ್ಯಂತ ಸುಮಾರು 14 ಸಾವಿರ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾದಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಲವು ವರ್ಷಗಳಿಂದ ಈ ಬಗ್ಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಈ ಬಗ್ಗೆ ಸರ್ಕಾರವಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿಲ್ಲ.
ಹೀಗಾಗಿ ಕೂಡಲೇ ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾ ಭದ್ರತೆ ನೀಡಬೇಕು. ಪ್ರಸ್ತುತ ವಿಧಾನಸಭೆ ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈ ಮೂಲಕ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
Key words: Secure -guest lecturers -d provide -service –security-protest-mysore