ಬೆಂಗಳೂರು,ಮಾರ್ಚ್,20,2022(www.justkannada.in): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ನ್ಯಾಯಾಧೀಶರಿಗೆ ಬೆದರಿಕೆ ಹಿನ್ನೆಲೆಯಲ್ಲಿ ವೈ ಕ್ಯಾಟಗರಿ ಭದ್ರತೆ ನೀಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಶ ದ್ರೋಹದ ಶಕ್ತಿಗಳು ನ್ಯಾಯಾಧೀಶರಿಗೆ ಬೆದರಿಕೆ ಹಾಕುವಂತಹ ವ್ಯವಸ್ಥಿತ ಕೆಲಸ ಮಾಡುತ್ತಿವೆ. ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಮೇಲೆ ಬೆದರಿಕೆ ಹಾಕಲಾಗಿದೆ. ನ್ಯಾಯಾಲಯದ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವ ಅವಕಾಶ ಇದೆ. ಆದರೂ ಜಡ್ಜ್ ಗಳಿಗೆ ಬೆದರಿಕೆ ಹಾಕಿರುವುದು ಖಂಡನೀಯ. ನಾನು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ನಾನು ನಮ್ಮ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳನ್ನ ನಮ್ಮ ರಾಜ್ಯದ ವಶಕ್ಕೆ ತೆಗೆದುಕೊಳ್ಳಬೇಕು. ಕಠಿಣವಾದ ಸೆಕ್ಷನ್ಗಳನ್ನು ಹಾಕಿ ಕೇಸ್ ನಡೆಸಲು ತಿಳಿಸಿದ್ದೇನೆ ಎಂದರು.
ನ್ಯಾಯಾಧೀಶರಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದಿದೆ. ಆದರೆ ಜಾತ್ಯಾತೀತವಾದಿಗಳು ಮೌನವಾಗಿದ್ದಾರೆ. ಒಂದು ವರ್ಗದ ಜನಕ್ಕೆ ಇಷ್ಟು ಓಲೈಕೆ ಮಾಡುವುದು ಸರಿಯಲ್ಲ. ಈಗಲಾದರೂ ಹೊರಗೆ ಬಂದು ಈ ಘಟನೆಯನ್ನು ಖಂಡಿಸಲಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ಇಬ್ಬಗೆಯ ನೀತಿಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.
Key words: security –judges-CM B-asavaraja Bommai