ಮೈಸೂರು, ಜುಲೈ 13, 2019, (www.justkannada.in): ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಜುಲೈ 17ರಂದು ವಿಚಾರ ಸಂಕಿರಣಕ್ಕೆ ಚಾಲನೆ ಸಿಗಲಿದೆ. ಭಾರತದಲ್ಲಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ: ಸಮಸ್ಯೆಗಳು ಹಾಗೂ ಸವಾಲುಗಳು ವಿಷಯ ಕುರಿತು ಎರಡು ದಿನ ಸಂಪನ್ಮೂಲ ವ್ಯಕ್ತಿಗಳು ವಿಚಾರ ಮಂಡಿಸಲಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಬಾಬಾ ಸಾಹೇಬ್ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ಸುಭಾಷ್ ನಾಟಿಕರ್ ವಿಚಾರ ಸಂಕಿರಣಕ್ಕೆ ಚಾಲನೆ ನೀಡುವರು. ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಟಿ.ಬಿ.ಬಸವನಗೌಡ ಅವರು ಅಧ್ಯಕ್ಷತೆ ವಹಿಸುವರು. ತಮಿಳುನಾಡು ಬುಡಕಟ್ಟು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಸುಬ್ರಹ್ಮಣ್ಯ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ.ಎಂ.ಆರ್.ಗಂಗಾಧರ್ ಪಾಲ್ಗೊಳ್ಳುವರು.