ಮೈಸೂರು,ಡಿ,31,2019(www.justkannada.in): ರಂಗಾಯಣದ ನೂತನ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಹಾಗೂ ಸಾಹಿತಿ ಅಡ್ಡಂಡ ಕಾರ್ಯಪ್ಪ ಅಧಿಕಾರ ಸ್ವೀಕರಿಸಿದರು.
ಕಲಾಮಂದಿರ ರಂಗಾಯಣದ ಕಚೇರಿಯಲ್ಲಿ ಇಂದು ಕಾರ್ಯಪ್ಪ ಅಧಿಕಾರ ವಹಿಸಕೊಂಡರು. ಈ ಮೂಲಕ ಕಳೆದ ಮೂರು ತಿಂಗಳಿಂದ ಖಾಲಿ ಇದ್ದ ರಂಗಾಯಣ ನಿರ್ದೇಶಕ ಹುದ್ದೆಯನ್ನ ಕಾರ್ಯಪ್ಪ ಅಲಂಕರಿಸಿದ್ದಾರೆ. ಅಧಿಕಾರ ಸ್ವೀಕಾರ ವೇಳೆ ಹಿರಿಯ ರಂಗಕರ್ಮಿಗಳು ಹಾಗೂ ರಂಗಾಯಣದ ಕಲಾವಿದರು ಪುಷ್ಪಗುಚ್ಚ ನೀಡಿ ಶುಭ ಹಾರೈಸಿದರು. ಕಾರ್ಯಪ್ಪ ಕೊಡಗು ಮೂಲದ ಹಿರಿಯ ರಂಗಕರ್ಮಿ ಹಾಗೂ ಸಾಹಿತಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕಾರ್ಯಪ್ಪ ಅವರು, ರಂಗಾಯಣದ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದು, ಸಂತದ ತಂದಿದೆ. ರಂಗಾಯಣದ ಏಳಿಗೆಗಾಗಿ ಸಾಕಷ್ಟು ಕನಸುಗಳನ್ನು ಕಂಡಿದ್ದೇನೆ. ಬಿವಿ ಕಾರಂತರು ಸ್ಥಾಪಿಸಿರುವ ರಂಗಾಯಣವನ್ನ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತೇನೆ.ಪ್ರತಿವರ್ಷ ಸಂಕ್ರಾತಿಯ ದಿನ ಆರಂಭವಾಗುತ್ತಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ಮುಂದೂಡಿಕೆ ಆಗಲಿದೆ. ನಿಧಾನವಾಗಿಯಾದರೂ ಪ್ರಧಾನವಾಗಿ ಬಹುರೂಪಿ ನಾಟಕೋತ್ಸವನ್ನ ಆಯೋಜನೆ ಮಾಡುತ್ತೇವೆ ಎಂದು ಹೇಳಿದರು.
ಸಾಂಸ್ಕೃತಿಕ ಸಂಸ್ಥೆಗಳಿಗೆ ನಿರ್ದೇಶಕರನ್ನ ಆಯ್ಕೆ ಮಾಡಿದಾಗ ಸರ್ಕಾರಗಳು ಅಧಿಕಾರ ಪೊರೈಸಲು ಅವಕಾಶ ಮಾಡಿಕೊಡಬೇಕು. ಈ ಬಗ್ಗೆ ಬರಗೂರು ರಾಮಚಂದ್ರಪ್ಪ ಸಮಿತಿ ಕೂಡ ವರದಿ ನೀಡಿದೆ. ಸರ್ಕಾರಗಳು ಬದಲಾದಾಗ ಸಾಂಸ್ಕೃತಿಕ ಸಂಸ್ಥೆಗಳ ನಿರ್ದೇಶಕರನ್ನ ಬದಲು ಮಾಡುವುದು ಸರಿಯಾದ ಕ್ರಮವಲ್ಲ. ಇದರಿಂದ ಸಂಬಂಧಪಟ್ಟ ಸಾಂಸ್ಕೃತಿಕ ಸಂಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಅದರ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ. ಯಾವುದೇ ಸಾಂಸ್ಕೃತಿಕ ಸಂಸ್ಥೆ ನಿರ್ದೇಶಕರನ್ನ ಮೂರು ವರ್ಷ ಪೂರ್ತಿ ಅಧಿಕಾರ ಪೂರೈಸಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.
ನಿರ್ದೇಶಕರಾಗಿರುವುದಕ್ಕೆ ಬಿಜೆಪಿ ವಕ್ತಾರನಾಗಿದ್ದೇ ಕಾರಣವಾಗಿರಬಹುದು. ನಾನು ರಂಗಾಯಣದ ನಿರ್ದೇಶಕನಾಗಬೇಕೆಂದು ಪ್ರಯತ್ನ ಪಟ್ಟಿದ್ದೆ ಆದ್ರೆ ನಿರೀಕ್ಷೆಯಲ್ಲಿ ಇರಲಿಲ್ಲ. ಆದ್ರೂ ಕೂಡ ಸರ್ಕಾರ ನನ್ನ ಮೇಲೆ ನಂಬಿಕೆಯಿಟ್ಟು ಹುದ್ದೆ ನೀಡಿದೆ ಎಂದು ಅಡ್ಡಂಡ ಕಾರ್ಯಪ್ಪ ತಿಳಿಸಿದರು.
Key words: Senior actor- writer- addenda Kariyappa -appointed – new Director –rangayana