ಮೈಸೂರು,ಜೂನ್,22,2023(www.justkannada.in): ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಿರಿಯ ನಾಗರಿಕರಿಗೆ ಮುಜರಾಯಿ ದೇಗುಲಗಳಲ್ಲಿ ನೇರ ದರ್ಶನ ಸೌಲಭ್ಯ ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದ್ದು, 65 ವರ್ಷ ಮೇಲ್ಪಟ್ಟವರು ನೇರವಾಗಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಹಿರಿಯ ನಾಗರಿಕರು ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಕಾಯುವ ಅವಶ್ಯಕತೆ ಇಲ್ಲ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಎ ಮತ್ತು ಬಿ ವರ್ಗದ ದೇವಾಲಯಗಳಲ್ಲಿ ಈ ಸೌಲಭ್ಯ ಸಿಗಲಿದೆ.
ಕುಕ್ಕೆ ಸುಬ್ರಹ್ಮಣ್ಯ, ಮಲೇ ಮಹದೇಶ್ವರ ಬೆಟ್ಟ, ನಂಜನಗೂಡು, ಚಾಮುಂಡಿ ಬೆಟ್ಟ, ಕೊಲ್ಲೂರು ಮೂಕಾಂಬಿಕೆ ಸೇರಿದಂತೆ ನಾಡಿನ ಹಲವು ದೇವಾಲಯಗಳ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಯಸ್ಸಿಗೆ ಸಂಬಂಧ ಪಟ್ಟ ದಾಖಲೆ ತೋರಿಸಿ ದರ್ಶನ ಪಡೆಯಲು ಸೂಚನೆ ನೀಡಲಾಗಿದ್ದು, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಒಕ್ಕೂಟದ ಮನವಿ ಮೇರೆಗೆ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
Key words: senior citizens- temples-direct-entry