ಮೈಸೂರು,ಸೆಪ್ಟೆಂಬರ್,20,2020(www.justkannada.in) : ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಅಮರ್ ದಾಸ್ ಡಿ ಎಚ್.(83) ಅವರು ಭಾನುವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಮೈಸೂರಿನಲ್ಲಿರುವು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬಾಂಬೆಯ ಸೆಂಟ್ ಕ್ಷೇವಿಯರ್ ಕಾಲೇಜಿನಲ್ಲಿ ಫೋಟೋಗ್ರಫಿ ಡಿಪ್ಲೊಮಾ ಮಾಡಿ 1956ರಲ್ಲಿ ಮೈಸೂರಿಗೆ ಹಿಂದಿರುಗಿದರು. ಹವ್ಯಾಸಿ ಛಾಯಾಗ್ರಾಹಕರಾಗಿ ಮೈಸೂರಿನ ಹಲವಾರು ಘಟನಾವಳಿಗಳ ಅಪರೂಪದ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು. ಸುಧರ್ಮ, ಡೆಕ್ಕನ್ ಹೆರಾಲ್ಡ್ ಮುಂತಾದ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ ಆಶಾ ದಾಸ್, ಮಕ್ಕಳಾದ ಪ್ರೀತಿ, ಜ್ಯೋತಿ, ನಿತಿನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ನಗರದ ವಿಜಯನಗರದಲ್ಲಿರುವ ಚಿತಾಗಾರದಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
key words : Senior-press-photographer-Amar Das D.H-Died