ಬೆಂಗಳೂರು,ಡಿಸೆಂಬರ್,1,2022(www.justkannada.in): ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಹಜ್ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಶಶಿಕಲಾ ಜೊಲ್ಲೆ, ಪ್ರತ್ಯೇಕ ಮುಸ್ಲಿಂ ಕಾಲೇಜಿಗಾಗಿ ಸರ್ಕಾರ ಅನುಮತಿ ನೀಡಿದೆ ಅನ್ನುವುದು ಸುಳ್ಳು. ರಾಜ್ಯ ಸರ್ಕಾರ ಅಂತಹ ಯಾವುದೇ ಹೇಳಿಕೆ ನೀಡಿಲ್ಲ ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕ ಅವರ ವೈಯಕ್ತಿಕ ಎಂದಿದ್ದಾರೆ.
ಪ್ರತ್ಯೇಕ ಮುಸ್ಲಿಂ ಕಾಲೇಜು ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಆರಂಭಿಸಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಊಹಾಪೋಹಗಳಿಗೆ ಸ್ಪಷ್ಟನೆ ನೀಡುವಂತೆ ಕೇಳಿದ್ದೇನೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.
Key words: Separate college – Muslim –women- Minister- Shashikala Jolle