ಬೆಂಗಳೂರು ,ಮೇ,5,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಪಕ್ಷದ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿವೆ. ಪ್ರಣಾಳಿಕೆಯಲ್ಲಿ ಜನರಿಗೆ ಹಲವು ಭರವಸೆಗಳನ್ನ ನೀಡಿದ್ದು ಇದೀಗ ಜೆಡಿಎಸ್ ರಾಜ್ಯರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೆಗೌಡರು ಪ್ರಣಾಳಿಕೆ ಪುಸ್ತಕವನ್ನ ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾವು ಬದ್ಧ . ಬೆಂಗಳೂರು ಸಾಕಷ್ಟು ಬೆಳೆದಿದೆ 1ಕೋಟಿಗೂ ಹೆಚ್ಚು ಜನ ಇದ್ದಾರೆ. ಬೆಂಗಳೂರಿ ಸಮಸ್ಯೆ ಪರಿಹಾರದ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟ ಮಾಡಿದ್ದೇವೆ ಎಂದರು.
ಬೆಂಗಳೂರಿಗೆ ಸಂಬಂಧಿಸಿದಂತೆ ಜೆಡಿಎಸ್ನ ಪ್ರಣಾಳಿಕೆಯಲ್ಲಿ 8 ಭರವಸೆಗಳನ್ನು ನೀಡಲಾಗಿದೆ. ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ, ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ, ನಗರದಲ್ಲಿ ಹಸಿರಿಕರಣ ಮತ್ತು ಅರಣ್ಯೀಕರಣ, ನಗರದಲ್ಲಿನ ಕಣಿವೆ, ಕೆರೆಗಳ ಸಂರಕ್ಷಣೆ, ಕಾಲುವೆಗಳ ಪುನಶ್ಚೇತನ, ಕೋರಮಂಗಲ – ಚೆಲ್ಲಗಘಟ್ಟ ವ್ಯಾಲಿ ಏತ ನೀರಾವರಿ ಯೋಜನೆಯ ಆಧುನಿಕರಣ ಈ ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.
Key words: Separate –manifesto- released – JDS – Bangalore.