ಬೆಂಗಳೂರು,ಸೆಪ್ಟಂಬರ್,18,2020(www.justkannada.in): ಸೆಪ್ಟಂಬರ 21 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಲಾಪಕ್ಕೆ ಹಾಜರಾಗುವ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ತಿಳಿಸಿದ್ದಾರೆ.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಕಲಾಪ ಆರಂಭಕ್ಕೂ ಮುನ್ನ ಹಾಗೂ ಮುಗಿದ ತಕ್ಷಣ ಎರಡೆರಡು ಬಾರಿ ಸ್ಯಾನಿಟೈಸ್ ಮಾಡ್ತೇವೆ. ಸಾಮಾಜಿಕ ಅಂತರಕ್ಕೆ ಹೆಚ್ಚು ಮಹತ್ವ ನೀಡಿದ್ದೇವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕಲಾಪ ನಡೆಸಲು ತೀರ್ಮಾನ ಮಾಡಲಾಗಿದೆ. ಆನ್ ಲೈನ್ ಹೆಚ್ಚು ಹೆಚ್ಚು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಇಲ್ಲಿವರೆಗೂ 1254 ಪ್ರಶ್ನೆಗಳನ್ನು ಸ್ವೀಕರಿಸಿದ್ದೇವೆ. ಒಂಭತ್ತು ವಿಧೇಯಕಗಳು ಪರಿಷತ್ತಿನ ಒಪ್ಪಿಗೆ ಪಡೆಯಬೇಕಿದೆ. ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಎಂಎಲ್ಸಿಗಳಿಗೆ ಮಾಹಿತಿ ನೀಡಿದ್ದೇವೆ. ಹಾಗೆಯೇ ಪಿಎಗಳು ಮತ್ತು ಗನ್ ಮ್ಯಾನ್ ಗಳು ಮೊದಲ ಮಹಡಿಯಲ್ಲಿ ಬರುವಂತಿಲ್ಲ ಎಂದು ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಮಾಹಿತಿ ನೀಡಿದರು.
Key words: session – Sep.21-covid Test – attending – legislative council-Secretary- Mahalakshmi,