ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಇಂದಿನಿಂದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿವೆ.ವಿವಿಧ ಸಂಘಟನೆಗಳು ಸೇರಿ ಭೂಸುಧಾರಣಾ ಕಾಯ್ದೆ ತಿದ್ದುಪಡಿ,ಕಾರ್ಮಿಕ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವ ಉದ್ದೇಶದಿಂದ ಬೆಂಗಳೂರಿನತ್ತ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರು ಹೊರಟಿದ್ದಾರೆ ಎಂದು ತಿಳಿದು ಬಂದಿದೆ.
ಭೂಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತರುವ ಮೂಲಕ ರೈತರ ಮರಣ ಶಾಸನ ಬರೆಯಲು ಮುಂದಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನ ಕೈ ಬಿಡಬೇಕು. ಮುಂದಿನ ದಿನಗಳಲ್ಲಿ ನಮ್ಮ ಪ್ರತಿಭಟನೆ ಉಗ್ರ ಸ್ವರೂಪ ತಾಳಲಿದೆ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ತಿಳಿಸಿದ್ದಾರೆ.
key words : Session-Beginning-Background-Farmer-Labor-Act-
Preparing-protest-against-amendment