ಮೈಸೂರು,ಆ,24,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ಆರಂಭವಾಗಿದ್ದು ಈ ನಡುವೆ ಇಂದು ದಸರಾ ಕಾರ್ಯಕಾರಿ ಸಮಿತಿಯ ಮೊದಲ ಸಭೆ ನಡೆಯುತ್ತಿದೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಸಭೆಗೆ ಮಾಜಿ ಸಚಿವರಾದ ಜಿ.ಟಿ ದೇವೇಗೌಡ, ಎನ್. ಮಹೇಶ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಪರಿಮಳಾ ಶ್ಯಾಮ್, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಸೇರಿದಂತೆ ಮತ್ತಿತರ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಆದರೆ ದಸರಾ ಕಾರ್ಯಕಾರಿ ಸಮಿತಿ ಸಭೆಗೆ ಬಿಜೆಪಿ ಶಾಸಕ ಎಸ್.ಎ ರಾಮದಾಸ್, ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಸೇರಿ ಹಲವು ಶಾಸಕರು ಗೈರಾಗಿದ್ದಾರೆ.
ಕೆ ಆರ್ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರಾಮದಾಸ್, ನಂಜನಗೂಡು ಕ್ಷೇತ್ರದ ಶಾಸಕ ಹರ್ಷವರ್ಧನ, ಗುಂಡ್ಲುಪೇಟೆ ಶಾಸಕ ನಿರಂಜನ್, ನರಸಿಂಹ ರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ , ಜೆಡಿಎಸ್ ಶಾಸಕ ಆರ್ ಅಶ್ವೀನ್ ಕುಮಾರ್, ಪಿರಿಯಾಪಟ್ಟಣದ ಶಾಸಕ ಕೆ ಮಹದೇವ್, ಹೆಚ್ ಡಿ ಕೋಟೆ ಕಾಂಗ್ರೆಸ್ ಶಾಸಕ ಅನಿಕ್ ಚಿಕ್ಕಮಾದು, ಮಾಜಿ ಸಚಿವ, ಶಾಸಕ ಪುಟ್ಟರಂಗಶೆಟ್ಟಿ, ಜೆಡಿಎಸ್ ಮಾಜಿ ಸಚಿವ ಶಾಸಕ ಸಾರಾ ಮಹೇಶ್, ಮೈಸೂರು- ಚಾಮರಾಜನಗರ ಕ್ಷೇತ್ರದ ಎಂಪಿ ವಿ. ಶ್ರೀನಿವಾಸ್ ಪ್ರಸಾದ್ ಗೈರಾಗಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಮೊದಲ ಸಚಿವ ಸಂಪುಟದಲ್ಲಿ ಹಳೆ ಮೈಸೂರು ಭಾಗ ಕಡೆಗಣನೆ ಮಾಡಲಾಗಿದ್ದು ಈ ಹಿನ್ನೆಲೆ ನಾಡಹಬ್ಬ ದಸರಾ ಮಹೋತ್ಸವದ ಮೊದಲ ಸಭೆಯಲ್ಲಿ ಅಸಮಾಧಾನ ಎದ್ದು ಕಾಣುತ್ತಿದೆ.
Key words: Several –MLA- – absent – Dasara -Working Committee meeting.