ಬೆಂಗಳೂರು, ಜುಲೈ, 26, 2024 (www.justkannada.in): ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು,ಈ ಹಿನ್ನೆಲೆಯಲ್ಲಿ ಮುಂದಿನ ಮುಖ್ಯ ಕಾರ್ಯದರ್ಶೀಯಾಗಿ ಶಾಲಿನಿ ರಜನೀಶ್ ಅವರನ್ನ ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಅಧಿಕೃತ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಹಾಲಿ ಸಿಎಸ್ (ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ) ರಜನೀಶ್ ಗೋಯಲ್ ಐದು ದಿನದಲ್ಲಿ ನಿವೃತ್ತಿ ಆಗಲಿದ್ದಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಈ ಮೂಲಕ ಪತಿ ನಿವೃತ್ತಿ ಬೆನ್ನಲ್ಲೇ ಪತಿಯ ಸ್ಥಾನವನ್ನ ಅಲಂಕರಿಸಿದ ಪತ್ನಿ ಅಲಂಕರಿಸಲಿದ್ದಾರೆ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.
Key words: Shalini Rajneesh, State’s, Next, Chief Secretary