ಬೆಂಗಳೂರು, ನವೆಂಬರ್ 17, 2019 (www.justkannada.in): ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಶರತ್ ಬಚ್ಚೇಗೌಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ನಾವೇ ಪಡೆಯುತ್ತೇನೆ ಎಂದು ಹೇಳಿದರು.
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶರತ್ ಬಚ್ಚೇಗೌಡ ಬಿಜೆಪಿ ವಿರುದ್ಧ ಆಕ್ರೋಶಗೊಂಡು ಪಕ್ಷೇತ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.