ನವದೆಹಲಿ, ಮೇ 23, 2019 (www.justkannada.in): ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯದಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಇದು ಷೇರು ಮಾರುಕಟ್ಟೆಯಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ.
ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 40,000 ಅಂಕಗಳ ಗಡಿ ದಾಟಿದ್ದು ಭಾರಿ ಏರಿಕೆ ಕಂಡಿದೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಈ ಬದಲಾವಣೆಗೆ ಕಾರಣ ಎನ್ನಲಾಗುತ್ತಿದೆ.
ನಿಫ್ಟಿ ಫಿಫ್ಟಿ ಕೂಡ 12000 ಗಡಿ ದಾಟಿದ್ದೂ ದೇಶಿ ಮಾರುಕಟ್ಟೆಯಲ್ಲಿ ಉತ್ಸಾಹ ಹೆಚ್ಚಿದೆ. ಚುನಾವಣೋತ್ತರ ಸಮೀಕ್ಷೆಯ ವರದಿಯಲ್ಲಿ ಎನ್ ಡಿಎ ಸರ್ಕಾರ ಹೆಚ್ಚು ಸೀಟ್ ಗಳಿಸುವ ಸಾಧ್ಯತೆ ವರದಿ ಮಾಡಿತ್ತು. ಆ ಸಂದರ್ಭದಲ್ಲೇ ಷೇರು ಮಾರುಕಟ್ಟೆಯಲ್ಲಿ ಉತ್ತಮ ಏರಿಕೆ ಕಂಡಿದ್ದು ಮತ್ತೊಮ್ಮೆ ಎನ್ಡಿಎ ಅಧಿಕಾರಕ್ಕೆ ಬಂದರೆ ಮತ್ತಷ್ಟು ಸಕಾರಾತ್ಮಕ ಬದಲಾವಣೆ ಕಂಡುಬರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.
ಈಗ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಗೂಳಿ ಆರ್ಭಟ ಕಂಡುಬಂದಿದ್ದು. ವಾಣಿಜ್ಯ ಕ್ಷೇತ್ರ ಎನ್ಡಿಎ ಸರ್ಕಾರದ ನಿರೀಕ್ಷೆಯಲ್ಲಿರುವಂತೆ ಕಂಡುಬರುತ್ತಿದೆ. ಒಟ್ಟಾರೆ ದೇಶಿ ಹೂಡಿಕೆದಾರರಲ್ಲಿ ಉತ್ಸಾಹ ಹೆಚ್ಚಿದೆ.