ಮೈಸೂರು,ಡಿಸೆಂಬರ್,27,2020(www.justkannada.in) : ಕುರುಬ ಸಮುದಾಯ ಎಸ್ಟಿಗೆ ಸೇರಿಸುವ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧ ಇಲ್ಲ. ಇದು ಸಿದ್ದರಾಮಯ್ಯ, ರೇವಣ್ಣ, ಈಶ್ವರಪ್ಪ, ವಿಶ್ವನಾಥ್ ಪ್ರಶ್ನೆ ಅಲ್ಲ. ಇದು ಸಮುದಾಯದ ಪ್ರಶ್ನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಕುರುಬ ಸಮುದಾಯ ಎಸ್ಟಿಗೆ ಸೇರಿಸುವ ಹೋರಾಟಕ್ಕೆ ಹೀಗಾಗಲೇ ಸಿದ್ದರಾಮಯ್ಯ ಅವರನ್ನು ಕರೆದಿದ್ದೇನೆ. ಅವರು ನಮ್ಮ ಜೊತೆಗೆ ಇದ್ದಾರೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರದಲ್ಲಿ ಎಲ್ಲಾ ಸಂಘಟನೆ ಪಕ್ಷಗಳ ಬೆಂಬಲ ಕೇಳಿದ್ದೇವೆ. ಅದರಲ್ಲಿ ಆರ್ ಎಸ್ ಎಸ್ ಸಹಾ ಇದೆ ಅದರಲ್ಲಿ ಸಮಸ್ಯೆ ಏನು..? ದೇಶದಲ್ಲಿರುವ ಎಲ್ಲಾ ಕುರುಬ ಅಧಿಕಾರಿಗಳಿಗೆ ಪತ್ರ. ಪತ್ರದ ಮೂಲಕ ಹೋರಟಕ್ಕೆ ಬೆಂಬಲ ಕೇಳುತ್ತೇವೆ ಎಂದರು.
ಆರ್ ಎಸ್ ಎಸ್ ಅಂದರೆ ಮೈಲಿಗೆ ಏಕೆ?
ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆರ್ ಎಸ್ ಎಸ್ ಕುಮ್ಮಕ್ಕು ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ದೇಶದಲ್ಲಿ ಆರ್ ಎಸ್ ಎಸ್ ಸಂಘಟನೆಯನ್ನು ಬ್ಯಾನ್ ಮಾಡಿದ್ದಾರಾ? ಆರ್ ಎಸ್ ಎಸ್ ಅಂದರೆ ಮೈಲಿಗೆ ಏಕೆ? ಆರ್ ಎಸ್ ಎಸ್, ಯೂಥ್ ಕಾಂಗ್ರೆಸ್, ಯುವ ಜನತಾದಳ, ಯುವ ಮೋರ್ಚಗಳಿವೆ. ಎಲ್ಲರ ಬೆಂಬಲ ನಮಗೆ ಬೇಕಾಗಿದೆ. ಬರೀ ಆರ್ ಎಸ್ ಎಸ್ ಬಗ್ಗೆ ಏಕೆ ಹೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಶ್ವನಾಥ್ ಪರೋಕ್ಷ ತಿರುಗೇಟು ನೀಡಿದರು.
key words : shepherd-community ST-Adding-Fight-Numbers-Siddaramaiah- No opposition-MLC Vishwanath …!