ಶಿಗ್ಗಾಂವಿ ಉಪಚುನಾವಣೆ: ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್

ಬೆಂಗಳೂರು,ಅಕ್ಟೋಬರ್,24,2024 (www.justkannda.in): ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು ಈ ನಡುವೆ ಇಂದು ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.

 ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್  ಸ್ಪರ್ಧಿಸಿದ್ದು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಕಾಂಗ್ರೆಸ್ ಪಕ್ಷದಿಂದ ಶಿಗ್ಗಾವಿ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಟಿಕೆಟ್ ನೀಡಲಾಗಿದೆ. ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ.

Key words: shiggaon by election, Congress candidate, announces