ಮೈಸೂರು,ಮಾರ್ಚ್,11,2023(www.justkannada.in): ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಶಿಲ್ಪಿ ಅಗರ್ವಾಲ್ ಅವರು ನೇಮಕಗೊಂಡಿದ್ದು ಇಂದು ಅವರು ರಾಹುಲ್ ಅಗರ್ವಾಲ್ ಅವರಿಂದ ಅಧಿಕಾರ ವಹಿಸಿಕೊಂಡರು.
ಇದಕ್ಕೂ ಮೊದಲು ಶಿಲ್ಪಿ ಅಗರ್ವಾಲ್ ಅವರು ರೈಲ್ವೆ ಸಚಿವಾಲಯದ ನಿರ್ಮಾಣ ವಿಭಾಗವಾದ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL)ನ ಯೋಜನೆಯ ಅನುಷ್ಠಾನ ಮತ್ತು ಸಾರಿಗೆ ಮೂಲಸೌಕರ್ಯ ಅಭಿವೃದ್ಧಿ (ಹಣಕಾಸು) ವಿಭಾಗದಲ್ಲಿ ಸಮೂಹ ಪ್ರಧಾನ ವ್ಯವಸ್ಥಾಪಕರಾಗಿದ್ದರು.
ಶಿಲ್ಪಿ ಅಗರ್ವಾಲ್ ಅವರು ಭಾರತೀಯ ರೈಲ್ವೆ ವಿತ್ತೀಯ ಸೇವೆಯ (IRAS) 1993 ರ ಬ್ಯಾಚ್ ಗೆ ಸೇರಿದವರು. ಲಕ್ನೋ ವಿಶ್ವವಿದ್ಯಾಲಯದಿಂದ ಕಲೆಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಮಾಜಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಶಿಲ್ಪಿ ಅಗರ್ವಾಲ್ ಅವರು ಭಾರತೀಯ ರೈಲ್ವೆಯಲ್ಲಿ ಸುಮಾರು ಮೂರು ದಶಕಗಳ ಅನುಭವವನ್ನು ಹೊಂದಿದ್ದು, ಉತ್ತರ ರೈಲ್ವೆ ಮತ್ತು ರೈಲ್ವೆ ಮಂಡಳಿಯ ಹಲವಾರು ಇಲಾಖೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ಸುದೀರ್ಘ ಮತ್ತು ಉತ್ತಮ ವೃತ್ತಿಜೀವನದ ಅವಧಿಯಲ್ಲಿ ಅವರು, ಭಾರತೀಯ ರೈಲ್ವೆಯ ಬಹುತೇಕ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ
Key words: Shilpi Agarwal- -Manager – South- Western- Railway- Mysore.