ಬೆಂಗಳೂರು, ಆಗಸ್ಟ್ 10, 2020 (www.justkannada.in): ನಟ ಸುದೀಪ್ ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದೀಪ್ ಕಾರ್ಯಕ್ಕೆ ಡಾ. ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದೀಪ್ ಅವರನ್ನು ಹೃದಯ ಪೂರ್ವಕವಾಗಿ ಅಭಿನಂದಿಸುವುದಾಗಿ ಸಚಿವ ಸುಧಾಕರ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.