ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಬಂಧ.

ಶಿವಮೊಗ್ಗ,ಡಿಸೆಂಬರ್,16,2024 (www.justkannada.in): ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೋಗ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ  ಜನವರಿ 01 ರಿಂದ ಮಾರ್ಚ್ 15ರವರೆಗೆ  ಮೂರು ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗ ಬಾರದೆಂಬ ಕಾರಣದಿಂದ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

Key words: Shimoga, Jog Falls, restricted ,three months