ಶಿವಮೊಗ್ಗ, ಅಕ್ಟೋಬರ್,3,2023(www.justkannada.in): ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನ ಬಂಧಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪ್ರಕರಣ ಕುರಿತು ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ . ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ರಾಗಿಗುಡ್ಡದಲ್ಲಿ 144 ಸೆಕ್ಷನ್ ಮುಂದುವರಿಯಲಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಇದ್ದರೂ ವ್ಯಾಪಾರ ವಹಿವಾಟಿಗೆ ಸಮಸ್ಯೆ ಇಲ್ಲ. ಶಿವಮೊಗ್ಗ ನಗರದಲ್ಲಿ ಎಲ್ಲೂ ಕೂಡ ಅಂಗಡಿ ಬಂದ್ ಮಾಡಿಸಿಲ್ಲ. ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಪೊಲೀಸರ ನಿಯೋಜಿಸಿದ್ದೇವೆ. ರಾಗಿಗುಡ್ಡ ಹೊರತುಪಡಿಸಿ ಶಿವಮೊಗ್ಗ ನಗರದಾದ್ಯಂತ ಸಹಜ ಸ್ಥಿತಿ ಇದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ.
Key words: Shimoga- Riot case – FIR -against -24 people- SP Mithun Kumar