ಬೆಂಗಳೂರು,ಅಕ್ಟೋಬರ್,2,2023(www.justkannada.in): ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಅಲ್ಲದೇ ಕತ್ತಿ ತಲ್ವಾರ್ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಕತ್ತಿ ಬಳಕೆ ಬಗ್ಗೆ ಮಾಹಿತಿ ಇಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್ , ಇದೆಲ್ಲ ಏನ್ ಹೊಸದಾಗಿ ನಡೆಯುತ್ತಿದೆಯಾ? ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ತಿಳಿಸಿದರು.
ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಸಲು ಬಿಡುವಿದಿಲ್ಲ ಎಂದರು.
Key words: shimogga- eid-milad-swords- – Home Minister- Parameshwar